ಗದಗ: ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ, ಪ್ರತಿಭಾವಂತರಿಗೆ ಸನ್ಮಾನ

ಗದಗ ನಗರದ ತಳಗೇರಿ ಓಣಿ (ಡಿ.ಸಿ. ಮಿಲ್), ವಾರ್ಡ್ 16ರಲ್ಲಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೃಷ್ಣಗೌಡ ಎಚ್. ಪಾಟೀಲ ಅವರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಸೇವಾ ಕಾರ್ಯಕ್ರಮ ಆಯೋಜಿಸಲಾಯಿತು.
ಶ್ರೀ ಹೆಚ್.ಕೆ. ಪಾಟೀಲ ಸಾಹೇಬರ ಸೇವಾ ತಂಡದ ವತಿಯಿಂದ ಅಂಗನವಾಡಿ ಮಕ್ಕಳಿಗೆ ನೋಟ್ಬುಕ್, ಪೆನ್ನು ಹಾಗೂ ಅಂಕಲಿಪ್ಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

