ಗಂಗಾವತಿ: ಶ್ರಾವಣ ಮಾಸದ ದೊಡ್ಡ ಹಬ್ಬಗಳಲ್ಲಿ ಒಂದಾಗಿರುವ ವರಮಹಾಲಕ್ಷ್ಮಿವನ್ನು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸುಮಂಗಲಿಯರು ಮನೆಗಳಲ್ಲಿ ಆಚರಣೆ ಮಾಡುವ ಮೂಲಕ ಸಂಭ್ರಮಿಸಿದರು.
ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ
ಹಣ್ಣುಗಳ ಬೆಲೆಯಲ್ಲೂ ಕೊಂಚ ಏರಿಕೆಯಾಗಿದೆ. ಸೇಬು 200 ರೂಪಾಯಿಯಿಂದ 250 ರೂಪಾಯಿವರೆಗೂ ಏರಿಕೆಯಾಗಿದೆ. ಎಲ್ಲಾ ಹಣ್ಣುಗಳ ಬೆಲೆಯಲ್ಲೂ 10-20 ರೂಪಾಯಿವರೆಗೂ ಹೆಚ್ಚಾಗಿದೆ. ಈ ಬಾರಿಯ ಬೆಲೆ ಏರಿಕೆ ಜನರಿಗೆ ಸ್ವಲ್ಪ ಮಟ್ಟಿಗೆ ಹೊರೆಯಾಗಲಿದೆ.
ವರಮಹಾಲಕ್ಷ್ಮಿ ಹಬ್ಬದ ಪೂಜೆಗಾಗಿ ಮನೆ-ಮನೆಗಳಲ್ಲಿ ಅಲಂಕಾರ ಮಾಡಲಾಗಿತ್ತು. ಹೂಗಳ ಖರೀದಿಯೂ ಭರ್ಜರಿಯಾಗಿ ನಡೆಯುತ್ತಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಯಲ್ಲಿ ಹೂಗಳ ಬೆಲೆ ಗಗನಕ್ಕೇರಿದೆ. ಹೂ ಬೆಳೆಗಾರರಿಗೆ ವರಮಹಾಲಕ್ಷ್ಮೀ ಹಬ್ಬ ವರದಾನವಾಗಿದೆ. ಬೇಡಿಕೆ ಹೆಚ್ಚಾದ ಹಿನ್ನೆಲೆ ಹೂಗಳಿಗೆ ಭಾರೀ ಬೆಲೆ ಬಂದಿದೆ. ಗುಲಾಬಿ, ಸೇವಂತಿಗೆ, ಕನಕಾಂಬರ, ಮಲ್ಲಿಗೆ ಎಲ್ಲಾ ಬಗೆಯ ಹೂಗಳ ಬೆಲೆಯಲ್ಲೂ ಗಣನೀಯ ಏರಿಕೆ ಕಂಡುಬಂದಿದೆ.
ಮಹಿಳೆಯರು ವರಮಹಾಲಕ್ಷ್ಮಿ ಹಬ್ಬವು ಆಚರಿಸಲ್ಪಡುವ ಹಬ್ಬವಾಗಿದೆ. ವರಮಹಾಲಕ್ಷ್ಮಿ ಹಬ್ಬವನ್ನು ಸಾಮಾನ್ಯವಾಗಿ ಜನರು ವರಮಹಾಲಕ್ಷ್ಮಿ ವ್ರತ, ವರಮಹಾಲಕ್ಷ್ಮಿ ಪೂಜೆಯೆಂದು ಕರೆಯುತ್ತಾರೆ. ಇದು ಮಹಿಳೆಯರಿಗೆ ಸಮರ್ಪಿತವಾದ ಹಬ್ಬವಾಗಿದ್ದು, ಈ ದಿನದಂದು ಮಹಿಳೆಯರು ತಮ್ಮ ಮನೆಯಲ್ಲಿ ಕಲಶವನ್ನಿಟ್ಟು, ಲಕ್ಷ್ಮಿ ದೇವಿಯ ಮೂರ್ತಿಯನ್ನಿಟ್ಟು ಅಥವಾ ಫೋಟೋವನ್ನಿಟ್ಟು ಪೂಜೆಯನ್ನು ಮಾಡುತ್ತಾರೆ. ವರಮಹಾಲಕ್ಷ್ಮಿ ಪೂಜೆಯನ್ನು ಮಾಡುವುದರಿಂದ ಲಕ್ಷ್ಮಿ ದೇವಿಯು ಸಂಪತ್ತು, ಸಮೃದ್ಧಿಯನ್ನು ಅನುಗ್ರಹಿಸುತ್ತಾಳೆ ಎನ್ನುವ ನಂಬಿಕೆಯಿದೆ. ವರಮಹಾಲಕ್ಷ್ಮಿ ಪೂಜೆಯು ಲಕ್ಷ್ಮಿ ದೇವಿಯ ವರ ನೀಡುವ ರೂಪಕ್ಕೆ ಸಮರ್ಪಿತವಾದ ಪೂಜೆಯಾಗಿದೆ.


