ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷರಾಗಿ ಜೆ.ಕೆ. ಹುಸೇನ್ಬಾಯಿ ಆಯ್ಕೆ
ಬಾಗಲಕೋಟೆ, ಆ.6: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ರಿ.) ಬಾಗಲಕೋಟೆ ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷರಾಗಿ ಮುಖ್ಯೋಪಾಧ್ಯಾಯರು ಹಾಗೂ ಲೇಖಕರಾದ ಜೆ.ಕೆ. ಹುಸೇನ್ಬಾಯಿ ಅವರು ಆಯ್ಕೆಯಾಗಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ನೂತನ ಸಭಾಭವನದಲ್ಲಿ ನಡೆದ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಅವರು ಅಧಿಕಾರ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ, ಜಿಲ್ಲಾ ಪಂಚಾಯತ್ ಧಾರವಾಡ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ. ಮನ್ನಿಕೇರಿ, ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷೆ ರಮಾ ಆರ್., ಸಂಸ್ಥಾಪಕ ಕಾರ್ಯದರ್ಶಿ ಪರ್ವೀನ್ ಬಾನು ಬಳ್ಳಣ್ಣವರ್, ಜಿಲ್ಲಾ ಕಾರ್ಯಾಧ್ಯಕ್ಷ ಜೆ.ಎಂ. ಬಾದಾಮಿ ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ನೌಕರರು ಹಾಗೂ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಸರ್ಕಾರಿ ನೌಕರರಲ್ಲಿ ಸಾಹಿತ್ಯ, ಸಂಸ್ಕೃತಿ ಹಾಗೂ ಕಲಾ ಚಟುವಟಿಕೆಗಳನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಸಂಘಟನೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂದು ಗಣ್ಯರು ಕರೆ ನೀಡಿದರು.

